ಮತ ಸೌಹಾರ್ದತೆ ಉಳಿಸಲು ಯೂತ್ ಲೀಗ್ ಪಾದಯಾತ್ರೆ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಮತ ಸೌಹಾರ್ದತೆಯನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಯೂತ್ ಲೀಗ್ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.

ಯೂತ್ ಲೀಗ್ ಜಿಲ್ಲಾಧ್ಯಕ್ಷ ಎಂ ಎಂ ಕಡವತ್ ಧ್ವಜವನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ರಾಜ್ಯದಲ್ಲಿ ಮತ ಸೌಹಾರ್ದತೆಗೆ ಹಾನಿಯಾಗುತ್ತಿದೆ. ಫ್ಯಾಸಿಸ್ಟುಗಳ ಅಟ್ಟಹಾಸದಿಂದ ಹಿಂದುಳಿದ ಸಮುದಾಯ ಮನೆಯಿಂದ ಹೊರಗೆ ಕಾಲಿಡಲು ಭಯಪಡುವಂತಹ ವಾತಾವರಣ ಸೃಷ್ಟಿಯಾಗಿದೆ” ಎಂದು ಹೇಳಿದರು.