ವಿಷ ಸೇವಿಸಿದ ಯುವಕ ಚಿಕಿತ್ಸೆ ಫಲಿಸದೆ ಸಾವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ವೈಯಕ್ತಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.

ಬೋಳ ಗ್ರಾಮದ ವಂಜಾರುಕಟ್ಟೆ ನಿವಾಸಿ ಸುಜಿತ್ (27) ಎಂಬಾತ ಕಳೆದ ಡಿ 18ರಂದು ರಾತ್ರಿ ಗದ್ದೆಗೆ ಸಿಂಪಡಿಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆಂದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 10 ದಿನಗಳ ಬಳಿಕ ಅವರು ಮೃತಪಟ್ಟಿದ್ದಾರೆ.

ಸುಜಿತ್ ದುಬೈನಲ್ಲಿ ಉದ್ಯೋಗಿಯಾಗಿದ್ದು ತನ್ನ ತಂಗಿಯ ಮದುವೆಗೆಂದು ಕಳೆದ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದರು. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಲಭ್ಯವಾಗಿಲ್ಲ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.