ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶಿಸಿದ ಯುವ ಮೋರ್ಚಾ ಕಾರ್ಯಕರ್ತರ ಸೆರೆ

ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಸೆರೆ ಹಿಡಿಯುತ್ತಿರುವುದು

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಕಾಸರಗೋಡು ಜನರಲ್ ಆಸ್ಪತ್ರೆಗೆ ಶಂಕು ಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಿದಾಗ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದು, ಕೂಡಲೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಕಣ್ಣೂರಿನಲ್ಲಿ ಬಿಜೆಪಿ ಕಾರ್ಯಕರ್ತನನ್ನು ಸಿಪಿಎಂನವರು ಕೊಲೆಗೈದ ಪ್ರಕರಣವನ್ನು ವಿರೋಧಿಸಿ ಕಪ್ಪು ಬಾವುಟ ಪ್ರದರ್ಶಿಸಲಾಗಿದೆ. ಕೆಲಸಮಯ ಉಧ್ವಿಗ್ನ ವಾತಾವರಣ ಇದ್ದು, ಬಳಿಕ ಶಾಂತಯುತವಾಯಿತು. ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನ ಹಾಗೂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಸೇರಿದಂತೆ ಒಂಭತ್ತು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.