ಯುವಮೋರ್ಚಾದಿಂದ ಪಿಎಸ್ಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ

ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಯುವ ಮೋರ್ಚಾ ಜಿಲ್ಲಾ ಸಮಿತಿಯಿಂದ ಪಿಎಸ್ಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಎಲ್ಲಾ ಉದ್ಯೋಗ ನೇಮಕಾತಿ ಪಿಎಸ್ಸಿ ಮೂಲಕವೇ ನಡೆಯಬೇಕೆಂದು ಆಗ್ರಹಿಸಿ ಯುವ ಮೋರ್ಚಾ ಪ್ರತಿಭಟನೆ ಹಮ್ಮಿಕೊಂಡಿತ್ತು.

ಸಂಘಟನೆಯ ಜಿಲ್ಲಾ ನೇತಾರ ವಿಜಯಕುಮಾರ್ ಧರಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯ ಇರಬಾರದು. ಪಿಎಸ್ಸಿ ಮುಖಾಂತರವೇ ಉದ್ಯೋಗ ನೇಮಕಾತಿ ಆಗಬೇಕು” ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು. ನೇತಾರ ಸಹಿತ ಹಲವಾರು ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.